ಬೆಂಗಳೂರು: ವಾಲ್ಮೀಕಿ ಜಯಂತಿ ದಿನವಾದ ಇಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮಾಡಿದ್ದಾರೆ. ಆದರೆ ಇದರಲ್ಲೂ ಅಪಸ್ವರ ಕೇಳಿಬಂದಿದೆ.ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ವಾಲ್ಮೀಕಿ ಜಯಂತಿ ದಿನಕ್ಕೆ ಸರ್ಕಾರಿ ರಜೆ ಘೋಷಿಸಿದ್ದೇ ನಾನು. ಇದೀಗ ಪುತ್ಥಳಿ ಅನಾವರಣೆ ಕಾರ್ಯಕ್ರಮಕ್ಕೆ ಸಿಎಂ ನನ್ನನ್ನು ಕಡೆಗಣಿಸಿದ್ದಾರೆ. ನಾನು ಬಂದರೆ ಜನ ಹುಚ್ಚೆದ್ದು ಕುಣಿಯುತ್ತಾರೆ