ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬೇಕಾಗಿರುವ ಕಾಂಗ್ರೆಸ್ ಅಭ್ಯರ್ಥಿ ರೆಬಲ್ ಸ್ಟಾರ್ ಅಂಬರೀಷ್ ಮುನಿಸಿಗೆ ಸಿಎಂ ಸಿದ್ದರಾಮಯ್ಯ ಮುಲಾಮು ಹಚ್ಚುತ್ತಾರಾ?ಮಂಡ್ಯ ವಿಧಾನಸಭೆ ಕ್ಷೇತ್ರದ ಟಿಕೆಟ್ ಕೊಟ್ಟರೂ ಅಂಬರೀಷ್ ಇನ್ನೂ ಮೀನ ಮೇಷ ಎಣಿಸುತ್ತಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರ ಬಳಿ ಬೇಡಿಕೆಯ ಪಟ್ಟಿಯನ್ನೇ ಮುಂದಿಟ್ಟಿದ್ದಾರೆ ಎನ್ನಲಾಗಿತ್ತು.ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಂಬರೀಷ್ ಅವರಿಗೆ ಈಗಾಗಲೇ ಬಿ ಫಾರಂ ಕೊಡಲಾಗಿದೆ. ಸ್ಪರ್ಧಿಸುವುದು ಬಿಡುವುದು