ಬೆಂಗಳೂರು: ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವಂತಹ ವಿಧೇಯಕ ಮಂಡಿಸಲು ಹೊರಟಿರುವ ಸರ್ಕಾರದ ವಿರುದ್ಧ ಮುಷ್ಕರ ನಿರತರಾಗಿರುವ ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ. ಖಾಸಗಿ ವೈದ್ಯರ ಮುಷ್ಕರದಿಂದಾಗಿ ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೇರಿದೆ. ಈ ಹಿನ್ನಲೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕರ್ತವ್ಯಕ್ಕೆ ಹಾಜರಾಗಿ ಎಂದು ಸಿಎಂ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.ಅತ್ತ ವೈದ್ಯರ ಮುಷ್ಕರದಿಂದಾಗಿ