ಮೈಸೂರು: ಹಿಂದೂಗಳು ಬಿಜೆಪಿಯವರ ಸೊತ್ತಲ್ಲ. ನನ್ನ ಹೆಸರಲ್ಲೂ ರಾಮ ಇದ್ದಾನೆ. ಅಂದರೆ ನಾನೂ ಹಿಂದೂ ಎಂದು ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ತಾವು ಹಿಂದೂ ಎನ್ನುವುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಜೆಪಿಯವರು ಹಿಂದೂ ಹೆಸರು ಹೇಳಿಕೊಂಡು ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ. ಬಿಜೆಪಿಯವರಿಗೆ ಹೇಗಾದರೂ ಮಾಡಿ ಚುನಾವಣೆಯಲ್ಲಿ ಗೆಲ್ಲಲು ಕಸರತ್ತು ನಡೆಸುತ್ತಿದ್ದಾರಷ್ಟೆ ಎಂದು ಸಿಎಂ ಟೀಕಿಸಿದ್ದಾರೆ.ಈ ನಡುವೆ ತಾವು ಮುಂಬರುವ ಚುನಾವಣೆಯಲ್ಲಿ ಶಾಸಕರಾಗಿಯೂ ಆಯ್ಕೆಯಾಗಲ್ಲ ಎಂದ ಜೆಡಿಎಸ್