ಬೆಂಗಳೂರು: ಬೆಂಗಳೂರು ರಕ್ಷಿಸಿ ಎಂದು ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್ ಕೊಟ್ಟಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರನ್ನು ಮುಳುಗಿಸಿದವರೇ ಬಿಜೆಪಿಯವರು. ಬೆಂಗಳೂರನ್ನು ಬಿಜೆಪಿ ಗೂಂಡಾಗಳಿಂದ ರಕ್ಷಿಸಬೇಕಷ್ಟೇ. ಯಾವ ಪಾದಯಾತ್ರೆ ಮಾಡಿದ್ರೆ ಏನು ಪ್ರಯೋಜನ? ಎಂದು ಟಾಂಗ್ ಕೊಟ್ಟಿದ್ದಾರೆ.ಅತ್ತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೂಡಾ ಇದೇ ವಿಚಾರಕ್ಕೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಗೂಂಡಾಗಿರಿ ನಡೆಸುತ್ತಿರುವವರೇ ಬಿಜೆಪಿಯವರು ಎಂದು