ಬೆಂಗಳೂರು: ಉತ್ತರ ಪ್ರದೇಶದಲ್ಲಿ ತಮ್ಮದೇ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮೊದಲು ನಮಗೆ ಲೆಕ್ಚರ್ ಕೊಡುವುದನ್ನು ನಿಲ್ಲಿಸಿ. ನಿಮ್ಮ ಕ್ಷೇತ್ರದಲ್ಲಿ ನಿಮ್ಮ ಪಕ್ಷ ಉಳಿಸಿಕೊಳ್ಳುವುದು ಹೇಗೆ ಎಂದು ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ, ಸಿಎಂ ಯೋಗಿಗೆ ಲೇವಡಿ ಮಾಡಿದ್ದಾರೆ.ಇತ್ತೀಚೆಗೆ ಕರ್ನಾಟಕಕ್ಕೆ ಬಿಜೆಪಿ ರ್ಯಾಲಿಗೆ ಬಂದಿದ್ದ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ