ಬೆಂಗಳೂರು: ಚುನಾವಣೆ ಮುಗಿದಿದೆ. ಇನ್ನು ಫಲಿತಾಂಶವೊಂದೇ ಬಾಕಿ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ಬಿಜೆಪಿಗೆ ಬಹುಮತ ಬರಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಚಿಂತೆ ಮಾಡದಂತೆ ಸಿಎಂ ಟ್ವೀಟ್ ಮಾಡಿದ್ದಾರೆ.ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಮತ್ತು ಹಿತಚಿಂತಕರೇ, ನೀವೂ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿ ನನ್ನಂತೇ ದಣಿದಿದ್ದೀರಿ ಎಂದು ಗೊತ್ತು. ಎಕ್ಸಿಟ್ ಪೋಲ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಆರಾಮವಾಗಿರಿ. ಕುಟುಂಬದ