ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಿನ ಜನತೆಯ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದರು. ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾರಿ ದಸರಾ ಸಂದರ್ಭದಲ್ಲೂ ರಾಜ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಜನತೆ ಸಂಕಷ್ಟದ ಸ್ಥಿತಿ ಎದುರಿಸುತ್ತಿದ್ದಾರೆ. ಹಿಂಗಾರು ಮಳೆಯಾದರೂ ಚೆನ್ನಾಗಿ ಸುರಿದು ನಾಡಿನ ಜನತೆಯ ಸಂಕಷ್ಟವನ್ನು ದೂರ ಮಾಡಲಿ ಎಂದು ಪ್ರಾರ್ಥಿಸಿದರು.