ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕಾವೇರಿ ಹೋರಾಟದ ಕುರಿತು ಮುಂದಿನ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಫಾಲಿ ನಾರಿಮನ್ ಅವರೊಂದಿಗೆ ಚರ್ಚೆ ನಡೆಸಿದರು. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆದ ಉಭಯ