ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿದ್ದಾರೆ. ಅವರಿಗೆ ಸಿಎಂ ಆಪ್ತ ಮರಿಗೌಡ ವಿರುದ್ಧ ನೀಡಿರುವ ಪ್ರಕರಣವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮರಿಗೌಡ ವಿರುದ್ಧ ಪ್ರಕರಣ ದಾಖಲಾಗಿ 22 ದಿನ ಕಳೆದರೂ ಅವರ ಬಂಧನವಾಗಿಲ್ಲ. ಪ್ರಕರಣ ಕುರಿತಂತೆ