ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ನಡೆಸುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ನಡೆಸುವುದರಿಂದ ಅನಾವಶ್ಯಕ ಖರ್ಚುಗಳನ್ನು ತಡೆಯಬಹುದಾಗಿದ್ದು, ಅಭಿವೃದ್ಧಿ ಪರ ಕೆಲಸಗಳತ್ತ ಗಮನ ಹರಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಪದೇ ಪದೇ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ