ಚಿಕ್ಕಮಗಳೂರು: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿಟಿ ರವಿಗೆ ಅವರದೇ ನೆಲದಲ್ಲಿ ಟಾಂಗ್ ಕೊಟ್ಟಿದ್ದಾರೆ.ಚಿಕ್ಕಮಗಳೂರಿನಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಸಿಟಿ ರವಿ ಅಲ್ಲ, ಅವರು ಲೂಟಿ ರವಿ. ಹೀಗಂತ ನಾನು ಹೇಳುತ್ತಿಲ್ಲ. ಚಿಕ್ಕಮಗಳೂರಿನವರೇ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಬಿಜೆಪಿಯವರು ಸತ್ತ ಹೆಣದ ಮೇಲೆ ರಾಜಕೀಯ ಮಾಡ್ತಾರೆ. ಇವರಿಗೆ ಮಾನ ಮರ್ಯಾದೆ ಇದ್ಯಾ?