ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧನೆ ಎಂದರೆ ದೇಶದಲ್ಲಿಯೇ ರಾಜ್ಯವನ್ನು 3ನೇ ಭ್ರಷ್ಟ ರಾಜ್ಯವನ್ನಾಗಿಸಿರುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ಬರಗಾಲ ಪೀಡಿತ ಪ್ರದೇಶಗಳ ಪ್ರವಾಸದಲ್ಲಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ರೈತರ ಸಾಲ ಮನ್ನಾ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆಯಿಲ್ಲದಂತಾಗಿದ್ದು ಆತಂಕದ ಸ್ಥಿತಿಯಲ್ಲಿದ್ದಾರೆ. ಭ್ರಷ್ಟ ಅಧಿಕಾರಿಗಳು ರಾಜ್ಯವನ್ನು ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.