ಭಾರೀ ಮಳೆಯಿಂದಾಗಿ ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮುಂದೂಡಲ್ಪಟ್ಟಿತ್ತು. ಆದರೂ ಆ ಗ್ರಾಮದ ಅಭಿವೃದ್ಧಿಗೆ ಸಿಎಂ ಬಂಪರ್ ಯೋಜನೆ ಘೋಷಣೆ ಮಾಡಿದ್ದಾರೆ.ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು.ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಹೈದರಾಬಾದ್ ಕರ್ನಾಟಕ