ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 22 ರಂದು ನಡೆಸಲಿರುವ ಗ್ರಾಮ ವಾಸ್ತವ್ಯ ಯಶಸ್ವಿಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಕಲಬುರಗಿ ತಾಲೂಕಿನ ಹೇರೂರ (ಬಿ) ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪವಾಗದಂತೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಇಲಾಖಾವಾರು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನತಾ ದರ್ಶನ ಕಾರ್ಯಕ್ರಮ ಮುಖ್ಯಮಂತ್ರಿಗಳ ಪ್ರಿಯವಾದ ಕಾರ್ಯಕ್ರಮವಾಗಿದೆ.