ಬೆಂಗಳೂರು,ಅ.6 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌಢ್ಯಕ್ಕೆ ತಿಲಾಂಜಲಿ ಹಾಡಿ ಗಡಿಜಿಲ್ಲೆ ಚಾಮರಾಜನಗರಕ್ಕೆ ನಾಳೆ ಭೇಟಿ ನೀಡುತ್ತಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗಲಿದೆ ಎಂಬ ಮೂಢನಂಬಿಕೆಯನ್ನು ಬದಿಗೊತ್ತಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಿಎಂ ಆಗಮಿಸುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಯಲ್ಲಿ ಚಾಮರಾಜನಗರಕ್ಕೆ ಒಂದೇ ಬಾರಿಯೂ