ಹಾವೇರಿ : ಬಿಜೆಪಿ ಬುಧವಾರ ರಾತ್ರೋರಾತ್ರಿ ಬಿಡುಗಡೆ ಮಾಡಿದ 2ನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ ಕೆಂಡಾಮಂಡಲರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.