ಜಲಧಾರೆ ಯೋಜನೆಯ ಮೂಲಕ ಸಮಗ್ರ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ಅದನ್ನು ಶೀಘ್ರ ಅನುಮೋದನೆ ನೀಡುವುದರ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಜನತಾದರ್ಶನ, ಗ್ರಾಮವಾಸ್ತವ್ಯ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ರೈಲಿನ ಮೂಲಕ ಬೆಂಗಳೂರಿನಿಂದ ಆಗಮಿಸಿ ರಾಯಚೂರು ಅತಿಥಿಗೃಹದಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ