ಬೆಂಗಳೂರು : ಕೊರೊನಾ ಸೋಂಕಿನ ಭೀತಿ ಹಿನ್ನಲೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಮಾಡುವಂತೆ ಆದೇಶಿಸಿದ ಸಿಎಂ ಯಡಿಯೂರಪ್ಪ ಇಂದು ಬೆಳಗಾವಿ, ಹುಬ್ಬಳ್ಳಿಗೆ ಪ್ರವಾಸ ಬೆಳೆಸಲಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ ಎಲ್ಲಾ ಸಭೆ ಸಮಾರಂಭ ರದ್ದು ಮಾಡಿದ್ದು, ಮಾಲ್, ಸರ್ಕಾರಿ ಕಚೇರಿಗಳು, ಶಾಲಾಕಾಲೇಜುಗಳನ್ನು ಬಂದ್ ಮಾಡಿಸಿದೆ. ಈ ನಡುವೆ ಸಿಎಂ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಅವರ ಮಗಳ ಮದುವೆ