ಬೆಳಗಾವಿ : ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್ಪಿ) ನಡೆಯಲಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಗೈರಾಗಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರ ಅತೃಪ್ತಿ ಹಿನ್ನೆಲೆಯಲ್ಲಿ ಸಿಎಂ ಮುಂದೆಯೇ ಸಮಸ್ಯೆ ಬಗೆಹರಿಸಿಕೊಳ್ಳಲಿ ಅಂತ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಹಾಗೇ ಈ ಸಭೆಗೆ ಸಿಎಂ ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಸಭೆಗೆ ಆಗಮಿಸುವುದಾಗಿ ಹೇಳಿದ ಸಿಎಂ ಕೊನೆ ಕ್ಷಣದಲ್ಲಿ ಸಭೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ -ಜೆಡಿಎಸ್ ಶಾಸಕರನ್ನು