ಬೆಳಗಾವಿ : ನೆರೆ ಸಂತ್ರಸ್ತರ ನೆರವಿಗೆ ನಿಂತ ಸಿಎಂ ಬಿಎಸ್ ಯಡಿಯೂರಪ್ಪ ಅವರು ರೈತ ಸಮುದಾಯಕ್ಕೆ ಕಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಂತ ದೊಡ್ಡ ಅನಾಹುತ ಆಗಿದೆ. ಹೀಗಾಗಿ ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ ಪರಿಹಾರಕ್ಕೆ ಬದಲಾವಣೆ ಮಾಡುವ ಪರಿಸ್ಥಿತಿ ಬಂದಿದೆ. ಆದಕಾರಣ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳುವುದರ ಮೂಲಕ ಸಿಎಂ ರೈತರಿಗೆ ಬಿಗ್ ಶಾಕ್ ನೀಡಿದ್ದಾರೆ.