ಬೆಂಗಳೂರು : ಸರ್ಕಾರದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರಾದ ತಿಪ್ಪಾರೇಡ್ಡಿ, ಗೂಳಿಹಟ್ಟಿ ಶೇಖರ್ ಹಾಗೂ ರಾಜೀವ್ ಅವರು ಬಿಜೆಪಿ ಸರ್ಕಾರ ಹಾಗೂ ಹೈಕಮಾಂಡ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿದ್ದು, ಈ ವಿಚಾರ ತಿಳಿದ ಸಿಎಂ ಯಡಿಯೂರಪ್ಪ ಈ ಮೂವರು ಶಾಸಕರನ್ನು ತಮ್ಮ ನಿವಾಸಕ್ಕೆ ಇಂದು ಕರೆಸಿಕೊಂಡು ತಿಳಿ ಹೇಳಿದ್ದಾರೆ. ನೀವು ಬಹಿರಂಗವಾಗಿ ಹೇಳಿಕೆ