ಮೈಸೂರು : ಕರ್ತವ್ಯ ನಿರತ ಡಿಸಿಪಿಗೆ ಸಿಎಂ ಯಡಿಯೂರಪ್ಪ ಅವರ ಸೋದರಳಿಯ ವರ್ಗಾವಣೆ ಮಾಡಿಸುವುದಾಗಿ ಧಮ್ಕಿ ಹಾಕಿದ್ದಾರೆ. ಇಂದು ಸಿಎಂ ಯಡಿಯೂರಪ್ಪ ಕೆಆರ್ ಎಸ್ ಜಲಾಶಯದಲ್ಲಿ ಬಾಗಿನ ಸಲ್ಲಿಸುವ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಈ ಹಿನ್ನಲೆಯಲ್ಲಿ ಸಿಎಂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿ ಸಿಎಂ ಆಗೂ ಇತರೆ ಸಚಿವರು ಪೂಜೆ ಸಲ್ಲಿಸುತ್ತಿದ್ದ ಕಾರಣಕ್ಕೆ ಭದ್ರತಾ ದೃಷ್ಟಿಯಿಂದ ಸಿಎಂ ಯಡಿಯೂರಪ್ಪ ಅವರ ತಂಗಿ ಮಗ ರಾಜೇಶ್ ಹಾಗೂ ಅವರೊಟ್ಟಿಗೆ ಇದ್ದ ಕಾರ್ಯಕರ್ತರನ್ನು