ನವದೆಹಲಿ: ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಅನುಭವಿಸುತ್ತಿರುವ ಹಿನ್ನಲೆಯಲ್ಲಿ 1.5 ಕೋಟಿ ಲಸಿಕೆ ಒದಗಿಸುವಂತೆ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಗೆ ಮೊರೆಯಿಟ್ಟಿದ್ದಾರೆ.ಪ್ರಧಾನಿ ಜೊತೆಗಿನ ವಿಡಿಯೋ ಸಂವಾದದ ವೇಳೆ ಸಿಎಂ ಈ ಬೇಡಿಕೆ ಮುಂದಿಟ್ಟಿದ್ದಾರೆ. ನಿನ್ನೆ ಕೊವಿಡ್ ಕುರಿತು ಚರ್ಚಿಸಲು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದರು.ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗಿದ್ದರೂ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಲಸಿಕೆ ನೀಡುವುದು