ಬೆಂಗಳೂರು: ಜೂನ್ 7 ರ ಬಳಿಕವೂ ಲಾಕ್ ಡೌನ್ ಮುಂದುವರಿಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆಯಾಗಲಿದೆ.ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಇಂದು ಸಿಎಂ ತಮ್ಮ ಗೃಹ ಕಚೇರಿಯಲ್ಲಿ ತಜ್ಞರು, ಪರಿಣಿತರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಲಾಕ್ ಡೌನ್ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಯಿದೆ.ಅದಾದ ಬಳಿಕ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚೆ ನಡೆಸಿ ಲಾಕ್ ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ