ಸಹಕಾರಿ ಸಂಘ-ಸಂಸ್ಥೆಗಳು, ಬ್ಯಾಂಕ್ ಗಳ ಚುನಾವಣೆಗೆ ರಾಜ್ಯ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಹಕಾರಿ ಸಂಘ-ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದು, ಈ ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು. ಸಹಕಾರ ಸಂಸ್ಥೆಗಳ ಚುನಾವಣೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದರೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಅವರು ಹೇಳಿದರು. ವಿಧಾನಸೌಧ ಆವರಣದಲ್ಲಿ