ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ದಿನದಂದು ಗೊಂದಲವಂತೂ ಇದ್ದೇ ಇದೆ. ಈ ಸಮ್ಮಿಶ್ರ ಸರಕಾರ ಪೂರ್ಣಾವಧಿ ಆಡಳಿತ ನಡೆಸುತ್ತದೆ ಎನ್ನುವುದು ಜನರಿಗೆ ನಂಬಿಕೆ ಇಲ್ಲ. ಹೀಗಂತ ಮಾಜಿ ಸಚಿವ ಕರುಣಾಕರ ರೆಡ್ಡಿ ಹೇಳಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಯಾವ ವೇಳೆಯಲ್ಲಿಯಾದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಹುದು. ಬಿಜೆಪಿಗೂ ಹೈಕಮಾಂಡ್ ಇದೆ. ನಮ್ಮವರು ಒಳ್ಳೆಯದು ಹಾಗೂ ಕೆಟ್ಟದ್ದನ್ನು ನೋಡಿ ಯೋಚನೆ ಮಾಡಿ ನಿರ್ಧಾರ ಮಾಡುತ್ತಾರೆ