ತುಮಕೂರು : ಚುನಾವಣಾ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಸಭೆಯೊಂದರಲ್ಲಿ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ ಮರಕ್ಕೆ 400 ರೂ ಪರಿಹಾರ ಈಗಾಗಲೇ ಕೊಡುತಿದ್ದೇವೆ. ಅದು ಸಾಕಾಗಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಜಯಚಂದ್ರ ಅವರು 400