ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು BJP ಕಡೆಗಣನೆ ಮಾಡಲಾಗುತ್ತಿದೆ ಎಂಬ ಅನುಮಾನಗಳಿಗೆ ಪೂರಕ ಎಂಬಂತೆ ಅವರ ಹೆಸರನ್ನು ಪ್ರಧಾನಿಗಳ ಕಾರ್ಯಕ್ರಮದಿಂದ ಕೈ ಬಿಡಲಾಗಿದೆ. ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ನಾಳೆ ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಆದರೆ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರನ್ನು ಕೈ ಬಿಡಲಾಗಿದೆ. ದಸರಾ ಸಮಯದಲ್ಲಿ ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದ ವೇಳೆಯೂ ಇದೇ ರೀತಿ ನಡೆದಿತ್ತು. ರಾಷ್ಟ್ರಪತಿಗಳ ಪೌರ ಸನ್ಮಾನ