ಕೋಲಾರ : ಬಡವರ ಹಸಿವು ನೀಗಿಸಲು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಜಿಲ್ಲೆಯ ಬಂಗಾರಪೇಟೆಯ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿದೆ. ಮಾರಾಟವಾದ ಅಕ್ಕಿಯು ಅಕ್ರಮವಾಗಿ 15ಕ್ಕೂ ಹೆಚ್ಚು ರೈಸ್ ಮಿಲ್ಗಳನ್ನು ಸೇರುತ್ತಿವೆ. ಹಲವು ಬಾರಿ ದಾಳಿ ನಡೆದರೂ ದಂಧೆ ಮಾತ್ರ ನಿಂತಿಲ್ಲ. ಈ ಹಿಂದೆ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ 2017ರಲ್ಲಿ ಟನ್ಗಟ್ಟಲೆ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದರು. ಕಳೆದ ವರ್ಷ ಪಿಆರ್ಎಸ್ ಆಗ್ರೋಟೆಕ್ ರೈಸ್