ಬೆಂಗಳೂರು: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಉಪ ಮಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಟೊಕಿಯೋ ಒಲಿಂಪಿಕ್-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ