ಕೋವಿಡ್-19 ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳಡಿಯ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರವಾಗಿ ಅವರ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಹೀಗಂತ ಬೀದರ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ಧರು, ವಿಧವೆಯರು, ಅಂಗವಿಕಲ ವೇತನ ಪಡೆಯುತ್ತಿರುವ ಪಿಂಚಣಿದಾರರು ಕೋವಿಡ್-19 ಇರುವ ಪ್ರಯುಕ್ತ ತಮ್ಮ ಮನೆಯಲ್ಲಿಯೇ ಇದ್ದು ಕೋವಿಡ್-19ರ ನಿಯಮಗಳನ್ನು ಪಾಲಿಸಬೇಕು.ಯಾವುದೇ ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಲ್ಲಿ ಜಮೆಯಾಗಿರುವ ತಮ್ಮ ಮಾಸಿಕ ಪಿಂಚಣಿಯನ್ನು