ಮಾಜಿ ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಕೇಸ್ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಇದೀಗ ಸ್ವಾಮೀಜಿಗಳು ಸಹ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ ಶಾಕ್ ನೀಡಿದ್ದಾರೆ. ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಆರೋಪ ಮಾಡಿದ್ದು, ಮಠಗಳಿಗೆ ಅನುದಾನ ಬಿಡುಗಡೆ ಮಾಡಬೇಕಾದರೂ 30% ಕಮೀಷನ್ ನೀಡಲೇಬೇಕು ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ,