ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡದರೂ ಪಾಲಿಕೆ ಆಯುಕ್ತರು ಬಿಡುತ್ತಿಲ್ಲ. ಈದ್ಗಾದಲ್ಲಿ ಗಣೇಶೋತ್ಸವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಮಾಡಿದೆ. ಈ ಮೂಲಕ ಪಾಲಿಕೆ ಹೊರಡಿಸಿದ್ದ ಠರಾವು ಪ್ರಕಾರ ಮೂರು ದಿನ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಇದ್ದ ಅಡೆತಡೆ ನಿವಾರಣೆಯಾಯ್ತು ಎಂದು ಎಲ್ಲರೂ ಭಾವಿಸಿದ್ರು.