ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಹೆಬ್ಬಾಳ ಕ್ಷೇತ್ರದ ಬಗ್ಗೆ ತಲೆಯಲ್ಲೂ ಬಂದಿಲ್ಲ ಎಂದು ತಿಳಿಸಿದ್ದಾರೆ. ಅಮಿತ್ ಶಾ ರಾಜ್ಯಕ್ಕೆ ಎಷ್ಟುಬಾರಿ ಬಾರಿ ಬಂದರೂ, ರಾಜ್ಯದಲ್ಲಿ ಬಿಜೆಪಿ ಗೆಲ್ಲಲ್ಲ. ಯಡಿಯೂರಪ್ಪ ಬಾಯಿಯನ್ನು ವರಿಷ್ಟರು ಮುಚ್ಚಿಸಿದ್ದಾರೆ. ಬಿಜೆಪಿಯಲ್ಲಿ ಗುಂಪು ಗಾರಿಕೆ ಹಾಗೇ ಇದೆ.