ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಒತ್ತಡ ಹಾಗೂ ಲಾಬಿ ಹೆಚ್ಚುತ್ತಿರುವುದು ಉಭಯ ಪಕ್ಷಗಳ ಮುಖಂಡರ ತಲೆನೋವಿಗೆ ಕಾರಣವಾಗುತ್ತಿದೆ.ಶಾಸಕರು ಹಾಗೂ ಮಾಜಿ ಸಚಿವರು, ಕೆಲವು ವಿಧಾನ ಪರಿಷತ್ ಸದಸ್ಯರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತಮ್ಮ ಗಾಡ ಫಾದರ್ ಗಳ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ