ವಿಜಯ್ ಸಂಕೇಶ್ವರ್ ವಿರುದ್ಧ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಿಸಲು ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ.ಜವಾಹರಲಾಲ್ ನೆಹರು ಅವರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿಯಾಗಿ ಹೇಳಿಕೆಯನ್ನು ವಿಜಯ ಸಂಕೇಶ್ವರ್ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಸಂಕೇಶ್ವರ್ ವಿರುದ್ಧ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು ನೀಡುತ್ತೇವೆ ಎಂದು ಎಂಎಲ್ ಸಿ ಪ್ರಕಾಶ್ ರಾಥೋಡ್, ಬ್ರಿಜೇಶ್ ಕಾಳಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ನೆಹರು ಬಾಬರ್ ವಂಶಸ್ಥರು ಎಂದು ವಿಜಯ ಸಂಕೇಶ್ವರ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಬರೆದುಕೊಂಡಿದ್ದಾರೆ.