ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉಮೇಶ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಮಾಜಿ ಸಚಿವರು ಸಂತ್ರಸ್ಥೆ ವಿಜಯಲಕ್ಷ್ಮಿ ಮೇಲೆ ಹಲವಾರು ಬಾರಿ ಅತ್ಯಾಚಾರವೆಸಗಿದ್ದಾರೆ ಎನ್ನುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯಲಕ್ಷ್ಮಿ ಆತ್ಮಹತ್ಯೆ ಪ್ರಯತ್ನ ಕೂಡಾ ಮಾಡಿದ್ದಾರೆ ಎಂದು ಮಹಿಳಾ ಆಯೋಗಕ್ಕೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸಂತ್ರಸ್ಥೆ