ರಾಷ್ಟ್ರಧ್ವಜ ಉಲ್ಟಾ ಹಾರಿಸಿದ ಪ್ರಕರಣದ ಹಿನ್ನೆಲೆ ಧ್ವಜ ಕಟ್ಟಿದ ದೈಹಿಕ ಶಿಕ್ಷಕ ಹಾಗೂ ಧ್ವಜಾರೋಹಣ ಮಾಡಿದವರ ವಿರುದ್ಧ ಕಲಘಟಗಿ ಠಾಣೆಯಲ್ಲಿ ದೂರು ದಾಖಲಾಗಿದೆ.ಆಗಷ್ಟ್15ರಂದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಅಂಬೇಡ್ಕರ್ ಪ್ರೌಢ ಶಾಲೆಯಲ್ಲಿ, ದೈಹಿಕ ಶಿಕ್ಷಕ ಪ್ರಕಾಶ ಕುಂಬಾರ ಹಾಗೂ ಶಾಲಾ ಸಮಿತಿ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ಉಲ್ಟಾ ಧ್ವಜ ಹಾರಿಸಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯೋತ್ಸವದ ದಿನದಂದು ಉಲ್ಟಾ ಧ್ವಜಾರೋಹಣ ಮಾಡಿದ್ದ ಲಿಂಗರೆಡ್ಡಿ ನಡುವಿನಮನಿ, ಉಲ್ಟಾ