ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದೆ.ಇದರ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಈಶ್ವರಪ್ಪನವರ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯಲು ರಮ್ಯಾ ಕಾಂಗ್ರೆಸ್ ಕಾರ್ಯರ್ತರಿಗೆ ಕರೆ ನೀಡುತ್ತಿರುವ ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೇ ಇಟ್ಟುಕೊಂಡು ನಿನ್ನೆಯಿಡೀ ಬಿಜೆಪಿ ನಾಯಕರು ರಮ್ಯಾಗೆ ಟಾಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಗಾರವೊಂದರಲ್ಲಿ ಬಿಜೆಪಿ