ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ ಕಾರಣ ಅವರ ವಿರುದ್ಧ ವಕೀಲರೊಬ್ಬರು ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ನಟ ಪ್ರಕಾಶ್ ರೈ ಖಾಸಗಿ ಕಾರ್ಯಕ್ರಮವೊಂದರಲ್ಲಿ ಗೋವುಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅಷ್ಟೇ ಅಲ್ಲದೇ ತುಂಬ ಕಡೆಗಳಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ. ಮುಂದೆಂದೂ ಅದು ಮರುಕಳಿಸಬಾರದು. ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಕೀಲ ಎನ್.ಕಿರಣ್ ಎಂಬುವರು