ಕಲಬುರಗಿ ವಿಮಾನ ನಿಲ್ದಾಣವನ್ನು ಪ್ರಸಕ್ತ ವರ್ಷದ ಅಂತ್ಯದೊಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಿದ್ಧಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಸಂಪೂರ್ಣವಾಗಿ ಸೆಪ್ಟೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕೆಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಅಧಿಕಾರಿಗಳಿಗೆ ತಾಕೀತು ಮಾಡಿದರು.ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುತ್ತಿಗೆದಾರರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲ ಕಟ್ಟಡ ಕಾಮಗಾರಿಗಳನ್ನು ಸೆಪ್ಟೆಂಬರ್ 10ರೊಳಗಾಗಿ ಪೂರ್ಣಗೊಳಿಸಿ ಲೋಕೋಪಯೋಗಿ ಇಲಾಖೆಗೆ ಒಪ್ಪಿಸಬೇಕು.