ಮೆಟ್ರೋ ಕೆಲಸ ಶೀಘ್ರವಾಗಿ ಪೂರ್ಣಗೊಳಿಸಿ

ಬೆಂಗಳೂರು| geetha| Last Modified ಸೋಮವಾರ, 8 ನವೆಂಬರ್ 2021 (17:43 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಹಲವು ಖಡಕ್ ಸೂಚನೆಗಳನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ.
 
ಬೆಂಗಳೂರಿನ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದ್ದಾರೆ.ಕೃಷ್ಣಾದಲ್ಲಿ ನಡೆದ ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.


ಇದರಲ್ಲಿ ಇನ್ನಷ್ಟು ಓದಿ :