ಹೋಳಿ ಧುಲಂಡಿ ಆಚರಣೆ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧನ ಮಾಡಿದ್ದಾರೆ.ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ಬಡಾವಣೆ ವ್ಯಾಪ್ತಿಯ ಗಾಲಿಬ್ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. ಹೋಳಿ ಹಬ್ಬದ ಅಂಗವಾಗಿ ಬಣ್ಣ ಎರಚಲು ಮುಂದಾದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು.ಘಟನೆಯಲ್ಲಿ ಒಬ್ಬ ಯುವಕ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಲಾಟೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಎರಡು