ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಸದಸ್ಯರು ಪಟ್ಟು ಹಿಡಿದಿದ್ದರಿಂದಾಗಿ ಪಾಲಿಕೆ ಸಭೆಯಲ್ಲಿ ಭಾರೀ ಗದ್ದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಶೀಘ್ರ ಬರಲಿರುವುದರಿಂದ ಅಭಿವೃದ್ದಿ ಬಗ್ಗೆ ಚರ್ಚೆ ನಡೆಯಬೇಕೆಂಬ ಸದಸ್ಯರ ಪಟ್ಟು ಪಾಲಿಕೆ ಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.ಸಿಪಿಎಂ ಸದಸ್ಯ ದಯಾನಂದ ಶೆಟ್ಟಿ ಪ್ರಸ್ತಾಪಿಸಿದ ಈ ವಿಚಾರಕ್ಕೆ ಬಿಜೆಪಿ ಸದಸ್ಯರು ಬೆಂಬಲಿಸಿ ಪಾಲಿಕೆಯ ಈ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ