ಮುಂದಿನ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ಆದರೆ, ಹೊಸದಾಗಿ ಆಯ್ಕೆಯಾದ ಶಾಸಕರು ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆ ಕುರಿತಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲು ನವದೆಹಲಿಗೆ ಆಗಮಿಸಿರುವ ಸಿಎಂ, ಚುನಾವಣೆಯಲ್ಲಿ ಯಾರು ಪಕ್ಷದ ನೇತೃತ್ವ ವಹಿಸಿಕೊಳ್ಳುತ್ತಾರೆ ಎನ್ನುವ ಬಗ್ಗೆ ಅನುಮಾನ ಬೇಡ. ಶಾಸಕಾಂಗ ಪಕ್ಷದ ನಾಯಕರೇ ಸದಾ ಚುನಾವಣೆ ನೇತೃತ್ವವಹಿಸುತ್ತಾರೆ ಎಂದರು. ಕೆಪಿಸಿಸಿ ಅಧ್ಯಕ್ಷ