ಕೆಎಸ್ಆರ್ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.