ಮುಂಬರುವ ಲೋಕಸಭಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿನ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಮತ್ತು ಆರ್.ಎಸ್.ಎಸ್. ಪ್ರಯತ್ನಿಸುತ್ತಿವೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.ಆಪರೇಷನ್ ಕಮಲದ ಮೂಲಕ ಬಿಜೆಪಿ ನಾಯಕರು, ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರನ್ನು ಸೆಳೆಯಲು ನಾವು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ರಾಜ್ಯಪಾಲರ ಆಡಳಿತ ಜಾರಿಗೆ ತರಲು ಬಿಜೆಪಿ ಮತ್ತು ಆರ್.ಎಸ್.ಎಸ್. ಪ್ರಯತ್ನಿಸುತ್ತಿವೆ.