ಬೆಂಗಳೂರು : ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ಗಳಿಗೆ ಸಂಪರ್ಕ ನೀಡದೇ ಸತಾಯಿಸಿದವರು ಈಗ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿದ್ದಾರೆ.ಇದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಕಾಂಗ್ರೆಸ್ ವಿರುದ್ಧ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸುನೀಲ್ ಕುಮಾರ್, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು