ಚುನಾವಣೆ ಹಿನ್ನಲೆ ಕಾಂಗ್ರೆಸ್ ತಯಾರಿ ಜೋರು

ಬೆಂಗಳೂರು| geetha| Last Modified ಗುರುವಾರ, 25 ನವೆಂಬರ್ 2021 (17:58 IST)

ಕೆಪಿಸಿಸಿ ಕಚೇರಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆ ಸಭೆ ನಡೆಸಲಾಯಿತು. ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಿ ಪಕ್ಷ ಸಂಘಟನೆ ಕುರಿತಂತೆ ಚರ್ಚೆ ನಡೆಸಿದರು.

ಅಲ್ಲದೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಸಿ, ನಮ್ಮ ಪಕ್ಷ ಬಿಟ್ಟು ಹೋದವರನ್ನು ಯಾವ ರೀತಿ ಸೆಳೆಯಬೇಕೆಂಬುದು ಹಾಗೂ ಸಮ್ಮಿಶ್ರ ಸರ್ಕಾರದಲ್ಲಿ ಇದ್ದಂತಹ ಶಾಸಕರನ್ನು ಯಾವ ರೀತಿ ತಮ್ಮತ್ತ ಸೆಳೆದುಕೊಳ್ಳಬೇಕು ಎಂಬುದರ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಯಿತು.ಇದರಲ್ಲಿ ಇನ್ನಷ್ಟು ಓದಿ :